1 ಅರಸುಗಳು 2:31 - ಕನ್ನಡ ಸತ್ಯವೇದವು C.L. Bible (BSI)31 ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅರಸನು ಅವನಿಗೆ - ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ರಾಜನು ಬೆನಾಯನಿಗೆ, “ಅವನು ಹೇಳಿದಂತೆ ಮಾಡು! ಅವನನ್ನು ಅಲ್ಲಿಯೇ ಕೊಂದುಬಿಡು. ನಂತರ ಅವನನ್ನು ಸಮಾಧಿ ಮಾಡು. ಆಗ ನನ್ನ ಕುಟುಂಬದವರು ಮತ್ತು ನಾನು ಯೋವಾಬನ ದೋಷದಿಂದ ಮುಕ್ತರಾಗುವೆವು. ಮುಗ್ಧ ಜನರು ಯೋವಾಬನಿಂದ ಕೊಲ್ಲಲ್ಪಟ್ಟ ಕಾರಣ ಈ ದೋಷವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು. ಅಧ್ಯಾಯವನ್ನು ನೋಡಿ |
ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.