Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:32 - ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:32
24 ತಿಳಿವುಗಳ ಹೋಲಿಕೆ  

ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;


ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.


“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.


ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.


ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.


ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು