Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:35 - ಕನ್ನಡ ಸತ್ಯವೇದವು C.L. Bible (BSI)

35 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:35
19 ತಿಳಿವುಗಳ ಹೋಲಿಕೆ  

ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.


ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.


ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು.


ಯೆಹೋಯಾದಾವನ ಮಗ ಬೆನಾಯನು - ಸೇನಾಪತಿ; ಎಬ್ಯಾತಾರ ಹಾಗು ಚಾದೋಕ - ಯಾಜಕರು;


‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.


ಅಲ್ಪವಾಗಿರಲಿ ಅವನ ಜೀವನಾವಧಿ I ಮತ್ತೊಬ್ಬನದಾಗಲಿ ಅವನಾಸ್ತಿಪಾಸ್ತಿ II


ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.


ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.


ಆದರೆ ಅವನು ನಿಮ್ಮ ಸೇವಕನಾದ ನನ್ನನ್ನು, ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ ಎಂಬವರನ್ನು ಹಾಗು ನಿಮ್ಮ ಸೇವಕ ಸೊಲೊಮೋನನನ್ನು ಔತಣಕ್ಕೆ ಕರೆಯಲಿಲ್ಲ.


ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕ. ಮೂರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ಇವನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು