Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:4 - ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:4
40 ತಿಳಿವುಗಳ ಹೋಲಿಕೆ  

“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


“ದೇವರೇ, ಸರ್ವೆಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.


ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು