Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:6 - ಕನ್ನಡ ಸತ್ಯವೇದವು C.L. Bible (BSI)

6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನಿಗೇನು ಮಾಡಬೇಕೆಂಬದು ಬುದ್ಧಿವಂತನಾದ ನಿನಗೆ ಗೊತ್ತುಂಟಲ್ಲಾ; ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:6
18 ತಿಳಿವುಗಳ ಹೋಲಿಕೆ  

ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


“ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು.


ಸನ್ಮಾರ್ಗದಲ್ಲಿ ನಡೆಯುವವರು ಶಯ್ಯೆಯಲ್ಲಿ ವಿಶ್ರಮಿಸುತ್ತಾರೆ; ಶಾಂತಿಸಮಾಧಾನವನ್ನು ಸೇರುತ್ತಾರೆ.


ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


“ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು