Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:9 - ಕನ್ನಡ ಸತ್ಯವೇದವು C.L. Bible (BSI)

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:9
13 ತಿಳಿವುಗಳ ಹೋಲಿಕೆ  

ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ಆಗ ತಮ್ಮ ಸೇವಕರಾದ ನಾವು, ತಮ್ಮ ಸೇವಕ ಹಾಗು ನರೆಕೂದಲಿನ ಮುದುಕ ಆದ ನಮ್ಮ ತಂದೆ ಸಂಕಟದಿಂದಲೆ ಸಮಾಧಿ ಸೇರಲು ಕಾರಣರಾಗುತ್ತೇವೆ.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು