1 ಅರಸುಗಳು 20:1 - ಕನ್ನಡ ಸತ್ಯವೇದವು C.L. Bible (BSI)1 ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ