Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:10
15 ತಿಳಿವುಗಳ ಹೋಲಿಕೆ  

ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


“ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.


ಆದುದರಿಂದ ಅವನು ಬಂದಂಥ ದೂತರ ಮುಖಾಂತರ ಬೆನ್ಹದದನಿಗೆ, “ನನ್ನ ಒಡೆಯರೇ, ಅರಸರೇ, ನಾನು ನಿಮ್ಮ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ; ಆದರೆ ಎರಡನೆಯ ಮಾತಿಗೆ ಒಪ್ಪಲಾರೆ,” ಎಂದು ಹೇಳಿಕಳುಹಿಸಿದನು ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದರು.


ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.


ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು