Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:12 - ಕನ್ನಡ ಸತ್ಯವೇದವು C.L. Bible (BSI)

12 ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:12
10 ತಿಳಿವುಗಳ ಹೋಲಿಕೆ  

ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.


ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ


‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು