Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:20 - ಕನ್ನಡ ಸತ್ಯವೇದವು C.L. Bible (BSI)

20 ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದರಿದನು; ಅರಾಮ್ಯರು ಓಡಿಹೋಗಲು ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಕೆಲವು ಮಂದಿ ರಾಹುತರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:20
15 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.


ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಮೊದಲು ಹೊರಟು ಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆಯೇ ಇಸ್ರಯೇಲ್ ಸೈನ್ಯದವರೂ ಬಂದರು.


ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.


ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.


ಇಸ್ರಯೇಲರಾದ ನಫ್ತಾಲಿ, ಆಶೇರ್ ಕುಲಗಳವರೂ ಮನಸ್ಸೆಕುಲದ ಜನರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು