Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:22 - ಕನ್ನಡ ಸತ್ಯವೇದವು C.L. Bible (BSI)

22 ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:22
20 ತಿಳಿವುಗಳ ಹೋಲಿಕೆ  

ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.


ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.


ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಆಗ ಇವನು ತನ್ನ ಗುರುತು ತಿಳಿಯಬಾರದೆಂದು ರುಮಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು, ಅರಸನು ಬರುವ ದಾರಿಯಲ್ಲಿ ಕಾದು ನಿಂತನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು