Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:31 - ಕನ್ನಡ ಸತ್ಯವೇದವು C.L. Bible (BSI)

31 ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಅವನ ಸೇವಕರು ಅವನಿಗೆ - ಇಸ್ರಾಯೇಲ್ಯರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿಗೆ ಹೋಗುವದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡುವದಾದರೆ ಅವನು ನಿನ್ನ ಜೀವವನ್ನು ಉಳಿಸಾನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:31
21 ತಿಳಿವುಗಳ ಹೋಲಿಕೆ  

ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.


ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.


ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು