1 ಅರಸುಗಳು 20:42 - ಕನ್ನಡ ಸತ್ಯವೇದವು C.L. Bible (BSI)42 ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.