Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಇಸ್ರಾಯೇಲ್ಯರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರಿಸಿ ಅವರಿಗೆ - ನೋಡಿದಿರಾ, ಅವನು ನಮಗೆ ಕೇಡು ಬಗೆಯುತ್ತಾನೆ; ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು ಎಂದು ಅವನು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡುಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆಪಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:7
18 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


ಅವರ ಮನಸ್ಸು ಯೋಚಿಸುವುದು ಹಿಂಸೆಯನ್ನು, ಅವರ ತುಟಿ ಪ್ರಸ್ತಾಪಿಸುವುದು ಹಾನಿಯನ್ನು.


ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ.


ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II


ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ಉದರದಲ್ಲಿ ವಂಚನೆಯನ್ನು ಗರ್ಭಧರಿಸುವರು ಕೇಡನು ಹಡೆವೆನೆಂದೆಣಿಸಿ ಶೂನ್ಯವ ಹೆರುವುದ ನೋಡು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.


ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.


ಹಿರಿಯರೆಲ್ಲರೂ ಜನಸಾಮಾನ್ಯರೂ ಅವನಿಗೆ, “ನೀವು ಈ ಮಾತಿಗೆ ಒಪ್ಪಬೇಡಿ,” ಎಂದರು.


ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು