Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:1 - ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಸಂಭವಿಸಿದ್ದೇನಂದರೆ - ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷೇತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಆ ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ಆ ದ್ರಾಕ್ಷಿತೋಟದ ಒಡೆಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:1
13 ತಿಳಿವುಗಳ ಹೋಲಿಕೆ  

ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಇಜ್ರೇಲ್, ಕೆಸುಲ್ಲೋತ್,


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಯೇಲರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು, ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು, ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು