Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:10 - ಕನ್ನಡ ಸತ್ಯವೇದವು C.L. Bible (BSI)

10 ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:10
18 ತಿಳಿವುಗಳ ಹೋಲಿಕೆ  

“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.


“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.


ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.


ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;


ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು