1 ಅರಸುಗಳು 21:13 - ಕನ್ನಡ ಸತ್ಯವೇದವು C.L. Bible (BSI)
13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
13 ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.
13 ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.
ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.
ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.
ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.
ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.
ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.
ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.