Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:15 - ಕನ್ನಡ ಸತ್ಯವೇದವು C.L. Bible (BSI)

15 ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯು ಇದನ್ನು ಕೇಳಿ ಅಹಾಬನಿಗೆ - ನೀನು ಹೋಗಿ ನಾಬೋತನು ಮಾರುವದಿಲ್ಲವೆಂದು ಹೇಳಿದ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೋ; ಅವನು ಜೀವದಿಂದಿಲ್ಲ, ಸತ್ತನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ಆ ದ್ರಾಕ್ಷಿತೋಟವನ್ನು ತೆಗೆದುಕೊ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:15
8 ತಿಳಿವುಗಳ ಹೋಲಿಕೆ  

ದುಷ್ಟತನವೇ ಅವರಿಗೆ ಅನ್ನ ಆಹಾರ; ಹಿಂಸಾಚಾರವೇ ಅವರಿಗೆ ಮದುಪಾನ.


ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.


ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.


ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಯೇಲರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು, ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು, ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು