Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:16 - ಕನ್ನಡ ಸತ್ಯವೇದವು C.L. Bible (BSI)

16 ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಹಾಬನು ದ್ರಾಕ್ಷಿತೋಟಕ್ಕೆ ಹೋಗಿ ಅದನ್ನು ತನ್ನದನ್ನಾಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾಬೋತನು ಸತ್ತನೆಂದು ಅಹಾಬನು ಕೇಳಿದಾಗ, ಅವನೆದ್ದು ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:16
14 ತಿಳಿವುಗಳ ಹೋಲಿಕೆ  

ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.


ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು.


ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು.


ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಯೇಲರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು, ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು, ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು