Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:19 - ಕನ್ನಡ ಸತ್ಯವೇದವು C.L. Bible (BSI)

19 ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:19
23 ತಿಳಿವುಗಳ ಹೋಲಿಕೆ  

ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ಕೂಲಿಕೊಡದೆ ಆ ಭೂಮಿಯ ಫಲವನು ನಾನು ಸವಿದಿದ್ದರೆ ಅದರ ದಣಿಗಳ ಪ್ರಾಣಹಾನಿಗೆ ನಾನು ಕಾರಣನಾಗಿದ್ದರೆ,


ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.


ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.


ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು