Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:2 - ಕನ್ನಡ ಸತ್ಯವೇದವು C.L. Bible (BSI)

2 ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಹಾಬನು ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:2
18 ತಿಳಿವುಗಳ ಹೋಲಿಕೆ  

ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನಿನ್ನ ತೋಟಗಳಿಗೆ ಬೇಕಾದ ಬುಗ್ಗೆ, ಉಕ್ಕಿಬರುವ ಒರತೆ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ ನಲ್ಲೆ :


ತೋಟ ಉದ್ಯಾನವನಗಳನ್ನು ಬೆಳೆಸಿದೆ. ಅವುಗಳಲ್ಲಿ ನಾನಾ ತರದ ಫಲವೃಕ್ಷಗಳನ್ನು ನಾಟಿಮಾಡಿಸಿದೆ.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.


‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.


ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.


ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು