Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:20 - ಕನ್ನಡ ಸತ್ಯವೇದವು C.L. Bible (BSI)

20 ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:20
20 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಆಗ ಇಸ್ರಯೇಲರ ಅರಸು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


“ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು