Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:22 - ಕನ್ನಡ ಸತ್ಯವೇದವು C.L. Bible (BSI)

22 ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ನನಗೆ ಕೋಪವನ್ನೆಬ್ಬಿಸಿದದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವದು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:22
11 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.


ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.


ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿಯೇ ಅಹಾಬನ ಮನೆಗೂ ಆಗುವುದು.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು