Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:25 - ಕನ್ನಡ ಸತ್ಯವೇದವು C.L. Bible (BSI)

25 ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:25
26 ತಿಳಿವುಗಳ ಹೋಲಿಕೆ  

ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.


ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.


ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿ ನೆಬಾಟನ ಮಗ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.


ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.


ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.


ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಯೇಲರ ದೇವರಾದ ಸರ್ವೇಶ್ವರನನ್ನು ರೇಗಿಸಿದನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು