Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರಿಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:26
24 ತಿಳಿವುಗಳ ಹೋಲಿಕೆ  

“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು