Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:27 - ಕನ್ನಡ ಸತ್ಯವೇದವು C.L. Bible (BSI)

27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:27
18 ತಿಳಿವುಗಳ ಹೋಲಿಕೆ  

ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ,


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು