Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:29 - ಕನ್ನಡ ಸತ್ಯವೇದವು C.L. Bible (BSI)

29 “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:29
27 ತಿಳಿವುಗಳ ಹೋಲಿಕೆ  

ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II


ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಇವರು ಜುದೇಯ ಪಟ್ಟಣಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಮಾಡುವುದನ್ನು ನೀನೆ ನೋಡಿರುವೆ ಅಲ್ಲವೆ?


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ,


ಮೂರು ವರ್ಷಗಳವರೆಗೆ ಇಸ್ರಯೇಲರಿಗೂ ಸಿರಿಯಾದವರಿಗೂ ಯುದ್ಧ ನಡೆಯಲಿಲ್ಲ.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಸರ್ವೇಶ್ವರ ಇದನ್ನು ನೋಡಿ ಶೆಮಾಯನಿಗೆ, “ಇವರು ತಮ್ಮನ್ನೇ ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪಕಾಲದಲ್ಲೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರ ನನ್ನ ರೌದ್ರವನ್ನು ಜೆರುಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.


ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು