Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:3 - ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:3
22 ತಿಳಿವುಗಳ ಹೋಲಿಕೆ  

ಇಸ್ರಯೇಲರ ಯಾವ ಸೊತ್ತೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಯೇಲರೆಲ್ಲರು ತಮ್ಮ ತಮ್ಮ ಕುಲಗಳ ಸೊತ್ತನ್ನು ತಾವೇ ಹೊಂದಿರಬೇಕು.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.


ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.


ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.


ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.


ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.


ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.


ಅದಕ್ಕೆ ಅವರು, “ಅಯ್ಯಾ, ನೀವು ಇಂಥಾ ಮಾತುಗಳನ್ನು ಆಡಬಹುದೆ! ನಿಮ್ಮ ಸೇವಕರಾದ ನಾವು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.


ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು