Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:10 - ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು. ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಈ ಇಬ್ಬರು ರಾಜರು ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:10
13 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.


ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.


ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ;” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.


ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು