1 ಅರಸುಗಳು 22:11 - ಕನ್ನಡ ಸತ್ಯವೇದವು C.L. Bible (BSI)11 ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |