Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:12 - ಕನ್ನಡ ಸತ್ಯವೇದವು C.L. Bible (BSI)

12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇತರ ಪ್ರವಾದಿಗಳೆಲ್ಲರೂ ಚಿದ್ಕೀಯನ ಮಾತನ್ನು ಬೆಂಬಲಿಸಿದರು. ಪ್ರವಾದಿಯು, “ನಿನ್ನ ಸೈನ್ಯವು ಈಗ ಹೊರಡಲಿ. ಅವರು ರಾಮೋತಿನಲ್ಲಿ ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲೇಬೇಕು. ನೀನು ಹೋರಾಟದಲ್ಲಿ ಜಯಗಳಿಸುವೆ. ನೀನು ಗೆಲ್ಲುವಂತೆ ಯೆಹೋವನು ಮಾಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:12
5 ತಿಳಿವುಗಳ ಹೋಲಿಕೆ  

ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.


ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು