Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:13 - ಕನ್ನಡ ಸತ್ಯವೇದವು C.L. Bible (BSI)

13 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:13
12 ತಿಳಿವುಗಳ ಹೋಲಿಕೆ  

“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು