Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:14 - ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ಯೆಹೋವನು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:14
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?


ಅದಕ್ಕೆ ಬಿಳಾಮನು, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿ ಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಚಿಕ್ಕದಾಗಿರಲಿ ದೊಡ್ಡದಾಗಿರಲಿ ಉಲ್ಲಂಘಿಸಲಾರೆ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಇದನ್ನು ಕೇಳಿ ಪ್ರವಾದಿ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದ್ದೇನೆ. ಇಗೋ, ನಿಮ್ಮ ಕೋರಿಕೆಯ ಪ್ರಕಾರ ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸುವೆನು. ಸರ್ವೇಶ್ವರ ಯಾವ ಉತ್ತರವನ್ನು ದಯಪಾಲಿಸುವರೋ ಅದರಲ್ಲಿ ಒಂದನ್ನೂ ಮುಚ್ಚುಮರೆಮಾಡದೆ ನಿಮಗೆ ತಿಳಿಸುವೆನು.” ಎಂದು ಹೇಳಿದನು.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


ಆಗ ಎಲೀಯನು, “ನಾನು ಸನ್ನಿಧಿಸೇವೆಮಾಡುತ್ತಿರುವ ಸರ್ವಶಕ್ತನಾಣೆ, ಈ ದಿನ ನಾನು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳಲೇಬೇಕು,” ಎಂದನು.


ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.


ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.


ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು