Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:17
21 ತಿಳಿವುಗಳ ಹೋಲಿಕೆ  

ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.


“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.


ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.


“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು