Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:19 - ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:19
30 ತಿಳಿವುಗಳ ಹೋಲಿಕೆ  

ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.


“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


ಯಕೋಬನ ಮನೆತನವೇ, ಇಸ್ರಯೇಲ್ ವಂಶದ ಸಕಲ ಗೋತ್ರಗಳೇ, ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿರಿ; ಸರ್ವೇಶ್ವರ ಹೀಗೆನ್ನುತ್ತಾರೆ :


ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.


ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ


“ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು