Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:20
7 ತಿಳಿವುಗಳ ಹೋಲಿಕೆ  

“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಕಡೆಗೆ ಒಂದು ಆತ್ಮವು ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರಿಸುವೆನು,’ ಎಂದಿತು.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು