Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:23 - ಕನ್ನಡ ಸತ್ಯವೇದವು C.L. Bible (BSI)

23 ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡುನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:23
19 ತಿಳಿವುಗಳ ಹೋಲಿಕೆ  

“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು