Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:27 - ಕನ್ನಡ ಸತ್ಯವೇದವು C.L. Bible (BSI)

27 ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:27
27 ತಿಳಿವುಗಳ ಹೋಲಿಕೆ  

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.


ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ;


ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು