Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಇಸ್ರಾಯೇಲ್ಯರ ಅರಸನು ತನ್ನ ಸೇವಕರಿಗೆ - ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ; ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ತಿರಿಗಿ ತೆಗೆದುಕೊಳ್ಳದೆ ಸುಮ್ಮನೆ ಕೂತಿರುತ್ತೇವೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:3
10 ತಿಳಿವುಗಳ ಹೋಲಿಕೆ  

ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.


ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.


ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.


ಇಸ್ರಯೇಲರ ಅರಸನು ಹಾಗು ಯೆಹೂದ್ಯರ ಅರಸ ಯೆಹೋಷಾಫಾಟನು ರಾಮೋತ್ ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.


ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.


ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು