1 ಅರಸುಗಳು 22:31 - ಕನ್ನಡ ಸತ್ಯವೇದವು C.L. Bible (BSI)31 ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |