Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:35 - ಕನ್ನಡ ಸತ್ಯವೇದವು C.L. Bible (BSI)

35 ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಅರಸನು ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡು ನಿಲ್ಲಬೇಕಾಯಿತು. ಸಾಯಂಕಾಲವಾದಾಗ ಅವನು ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೂ ಆ ದಿವಸ ಯುದ್ಧವು ಬಹುಘೋರವಾಗಿದ್ದದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:35
6 ತಿಳಿವುಗಳ ಹೋಲಿಕೆ  

ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.


ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.


ಅಬೀಮೆಲೆಕನು ಸತ್ತುಹೋದದ್ದನ್ನು ಕಂಡು ಇಸ್ರಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು