4 ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
4 ಯೆಹೋಷಾಫಾಟನನ್ನು - ಯುದ್ಧಮಾಡುವದಕ್ಕಾಗಿ ನೀನೂ ನಮ್ಮ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು
4 ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.
4 ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.
ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.
ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.