1 ಅರಸುಗಳು 22:43 - ಕನ್ನಡ ಸತ್ಯವೇದವು C.L. Bible (BSI)43 ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಇವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಪೂಜಾಸ್ಥಳಗಳನ್ನು ಹಾಳು ಮಾಡಲಿಲ್ಲ; ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಸುಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಯೆಹೋಷಾಫಾಟನು ಒಳ್ಳೆಯವನಾಗಿದ್ದನು. ಅವನು ತನ್ನ ತಂದೆಯ ಮಾರ್ಗವನ್ನು ಅನುಸರಿಸಿದನು. ಯೆಹೋವನು ಅಪೇಕ್ಷಿಸಿದವುಗಳಿಗೆಲ್ಲ ಅವನು ವಿಧೇಯನಾಗಿದ್ದನು. ಆದರೆ ಯೆಹೋಷಾಫಾಟನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾ ಧೂಪಹಾಕುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಅಧ್ಯಾಯವನ್ನು ನೋಡಿ |