1 ಅರಸುಗಳು 22:48 - ಕನ್ನಡ ಸತ್ಯವೇದವು C.L. Bible (BSI)48 ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.