Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:49 - ಕನ್ನಡ ಸತ್ಯವೇದವು C.L. Bible (BSI)

49 ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು - ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣಮಾಡುವದಕ್ಕೆ ಅಪ್ಪಣೆಯಾಗಲಿ ಎಂದು ಬೇಡಿಕೊಂಡನು; ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದದರಿಂದ ಓಫೀರನ್ನು ಮುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಆ ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:49
8 ತಿಳಿವುಗಳ ಹೋಲಿಕೆ  

ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.


ಒಮ್ಮೆ ಯೆಹೂದ್ಯರ ಅರಸ ಯೆಹೋಷಾಫಾಟನು, ಬಹು ದುರಾಚಾರಿಯಾದ ಇಸ್ರಯೇಲರ ಅರಸ ಅಹಜ್ಯನೊಡನೆ ಒಂದು ಒಪ್ಪಂದ ಮಾಡಿಕೊಂಡನು.


ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.


ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.


ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು