Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:50 - ಕನ್ನಡ ಸತ್ಯವೇದವು C.L. Bible (BSI)

50 ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೆಹೋಷಾಫಾಟನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೆಹೋಷಾಫಾಟನು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ನಂತರ ಅವನ ಮಗನಾದ ಯೆಹೋರಾಮನು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:50
9 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿದ್ದ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿಹೊಂದಿದ ಮೇಲೆ, ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.


ಅಹಾಬನು ಸತ್ತು ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಅಹಜ್ಯ ಎಂಬವನು ಅರಸನಾದನು.


ಅವನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.


ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.


ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು