Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:8 - ಕನ್ನಡ ಸತ್ಯವೇದವು C.L. Bible (BSI)

8 ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:8
39 ತಿಳಿವುಗಳ ಹೋಲಿಕೆ  

ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.


ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿಲ್ಲವೇ?’ ಎಂದು ಕೇಳಿದನು.


ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.


ಆಗ ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು