1 ಅರಸುಗಳು 3:1 - ಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ ಯೆಹೋವನ ಆಲಯವನ್ನೂ ಯೆರೂಸಲೇವಿುನ ಸುತ್ತಣ ಗೋಡೆಯನ್ನೂ ಕಟ್ಟಿ ತೀರಿಸುವ ತನಕ ಆಕೆಯನ್ನು ದಾವೀದನ ನಗರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೊಲೊಮೋನನು ಈಜಿಪ್ಟಿನ ರಾಜನಾದ ಫರೋಹನ ಮಗಳನ್ನು ಮದುವೆಯಾಗಿ ಅವನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಸೊಲೊಮೋನನು ಅವಳನ್ನು ದಾವೀದನಗರಕ್ಕೆ ಕರೆದು ತಂದನು. ಸೊಲೊಮೋನನು ಆ ಸಮಯದಲ್ಲಿ ತನ್ನ ಅರಮನೆಯನ್ನು ಮತ್ತು ಯೆಹೋವನ ದೇವಾಲಯಗಳನ್ನು ನಿರ್ಮಿಸುತ್ತಿದ್ದನು. ಜೆರುಸಲೇಮಿನ ಸುತ್ತಲೂ ಒಂದು ಗೋಡೆಯನ್ನು ಸಹ ಸೊಲೊಮೋನನು ನಿರ್ಮಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು. ಅಧ್ಯಾಯವನ್ನು ನೋಡಿ |