Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:11
10 ತಿಳಿವುಗಳ ಹೋಲಿಕೆ  

ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು