Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:12 - ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಕೋರಿಕೆಯನ್ನು ಅನುಗ್ರಹಿಸುವೆನು; ನಿನ್ನನ್ನು ಜ್ಞಾನಿಯನ್ನಾಗಿಯೂ ವಿವೇಕಿಯನ್ನಾಗಿಯೂ ಮಾಡುವೆನು. ಪೂರ್ವಕಾಲದಲ್ಲಿ ನಿನ್ನಂತವರು ಯಾರೊಬ್ಬರೂ ಇರಲಿಲ್ಲ ಎನ್ನುವಷ್ಟು ಜ್ಞಾನಿಯನ್ನಾಗಿ ನಿನ್ನನ್ನು ಮಾಡುತ್ತೇನೆ. ಮುಂದೆ ನಿನ್ನಂತವರು ಯಾರೊಬ್ಬರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:12
25 ತಿಳಿವುಗಳ ಹೋಲಿಕೆ  

ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ".


ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು